ದೇಶ

ಗೋರಕ್ ಪುರ ಆಸ್ಪತ್ರೆ ದುರಂತ: ಬಿಆರ್ ಡಿ ಆಸ್ಪತ್ರೆಗೆ ಕಾಂಗ್ರೆಸ್ ನಿಯೋಗದ ಭೇಟಿ

ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಮೇಲ್ವಿಚಾರಣೆಗಾಗಿ ಕಾಂಗ್ರೆಸ್ ನಿಯೋಗವೊಂದು ಇಂದು ಗೋರಕ್ ಪುರಕ್ಕೆ ಆಗಮಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಗೋರಕ್ ಪುರ ಆಸ್ಪತ್ರೆ ದುರಂತ: ಬಿಆರ್ ಡಿ ಆಸ್ಪತ್ರೆಗೆ ಕಾಂಗ್ರೆಸ್ ನಿಯೋಗದ ಭೇಟಿ
ಗೋರಕ್ ಪುರ ಬಿಆರ್ ಡಿ ಆಸ್ಪತ್ರೆ
Published On :

ಲಖನೌ: ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಮೇಲ್ವಿಚಾರಣೆಗಾಗಿ ಕಾಂಗ್ರೆಸ್ ನಿಯೋಗವೊಂದು ಇಂದು ಗೋರಕ್ ಪುರಕ್ಕೆ ಆಗಮಿಸಲಿದೆ ಎಂದು ಪಕ್ಷದ  ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದೇ ನೇತೃತ್ವದಲ್ಲಿ ನಾಲ್ಕು ಮಂದಿಯ ಕಾಂಗ್ರೆಸ್ ನಿಯೋಗ ಇಂದು ಗೋರಕ್ ಪುರಕ್ಕೆ ಆಗಮಿಸಲಿದ್ದು, ಪರಿಸ್ಥಿತಿ ಅವಲೋಕಿಸಲಿದ್ದಾರೆ. ಬಳಿಕ ಇಂದು ಸಂಜೆ ದೆಹಲಿಗೆ ತೆರಳಿ  ಕಾಂಗ್ರೆಸ್ ಹೈಕಮಾಂಡ್ ಗೆ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ರಾಜ್ ಬಬ್ಬರ್ ಸೇರಿದಂತೆ ಒಟ್ಟು ನಾಲ್ಕು ನಾಯಕರ ತಂಡ ಇಂದು ಗೋರಕ್ ಪುರಕ್ಕೆ ಆಗಮಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ,  ಅವರಿಗೆ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರ ತಂಡ ಸಾಥ್ ನೀಡಲಿದೆ. ಅಂತೆಯೇ ಇಂದು ಬೆಳಗ್ಗೆ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿಯಾಗಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.