ಜಮ್ಮು-ಕಾಶ್ಮೀರ: 41 ರಾಷ್ಟ್ರೀಯ ರೈಫಲ್ಸ್ ಪ್ರಧಾನ ಕಚೇರಿ ಮೇಲೆ ಉಗ್ರರ ದಾಳಿ; ಸೇನೆ ಕಾರ್ಯಾಚರಣೆ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿರುವ 41 ರಾಷ್ಟ್ರೀಯ ರೈಫಲ್ಸ್ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಸೇನಾ ಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕುಪ್ವಾರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿರುವ 41 ರಾಷ್ಟ್ರೀಯ ರೈಫಲ್ಸ್ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಸೇನಾ ಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಶನಿವಾರ ತಿಳಿದುಬಂದಿದೆ. 
ಕುಪ್ವಾರ ಜಿಲ್ಲೆ ಕಲರೂಸ್ ನ ಅರಣ್ಯ ಪ್ರದೇಶದಲ್ಲಿರುವ 41 ರಾಷ್ಟ್ರೀಯ ರೈಫಲ್ಸ್ ಪಡೆ ಪ್ರಧಾನ ಕಚೇರಿ ಮೇಲೆ ಕಳೆದ ರಾತ್ರಿ ಉಗ್ರರು ದಾಳಿ ನಡೆಸಿದ್ದಾರೆ. 
ಪ್ರಧಾನ ಕಚೇರಿಯಲ್ಲಿ 41 ರಾಷ್ಟ್ರೀಯ ರೈಫಲ್ಸ್ ಪಡೆಯೊದಿಗೆ 21 ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ ಪಡೆಗಳೂ ಕೂಡ ತಂಗಿದ್ದಾರೆ. ಕಳೆದ ರಾತ್ರಿ ಪ್ರಧಾನ ಕಚೇರಿ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. 10 ನಿಮಿಷಗಳ ಕಾಲ ಉಗ್ರರು ಎಡೆಬಿಡದೆ ಗುಂಡುಗಳನ್ನು ಹಾರಿಸಿದ್ದಾರೆ. ಈ ವೇಳೆ ಓರ್ವನ ಯೋಧನಿಗೆ ಗಾಯವಾಗಿದೆ. ಕೂಡಲೇ ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದೀಗ ಉಗ್ರರ ವಿರುದ್ಧ ಸೇನಾ ಪಡೆ ಸ್ಥಳದಲ್ಲಿ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಕಲರೂಸ್ ಅರಣ್ಯ ಪ್ರದೇಶ, ಕುನ್ನಾದ್, ಕನಿ ಬೆಹಕ್, ಮನಿಗಾಹ್, ಬಟ್ಪೊರಾ ಹೈಹಾಮಾ ದಲ್ಲಿರುವ ಚಾಟ್ ಅರಣ್ಯ ಪ್ರದೇಶ ಸೇರಿದಂತೆ ಹಲವೆಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಗಡಿಯಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ಮಹಿಳೆ ಬಲಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆಂದು ಶನಿವಾರ ತಿಳಿದುಬಂದಿದೆ. 
ರುಕಿಯಾ ಬಿ ಸಾವನ್ನಪ್ಪಿದ್ದ ಮಹಿಳೆಯಾಗಿದ್ದಾರೆ. ಬಾಲಕೋಟ್ ಸೆಕ್ಟರ್ ಬಳಿ ಬೆಳಿಗನ ಜಾವ 5 ಗಂಟೆ ಸುಮಾರಿಗೆ  ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com