ನ್ಯಾಷನಲ್ ಕಾನ್ಫರೆನ್ಸ್ ನಿಂದ ಆರ್ಟಿಕಲ್ 35ಎ ಕುರಿತು ಭಯ ಮೂಡಿಸುವ ಯತ್ನ: ಬಿಜೆಪಿ

ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ ಆರ್ಟಿಕಲ್ 35 ಎ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಭಯ ಮೂಡಿಸುವ ಯತ್ನ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ
ಬಿಜೆಪಿ
ಜಮ್ಮು: ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ ಆರ್ಟಿಕಲ್ 35 ಎ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಭಯ ಮೂಡಿಸುವ ಯತ್ನ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. 
ಜಮ್ಮು-ಕಾಶ್ಮೀರದಲ್ಲಿ ಅಲ್ಪಸಂಖ್ಯಾತರನ್ನು ಪಣಕ್ಕಿಟ್ಟು, ಜನಸಂಖ್ಯೆಯಲ್ಲಿ ಹೆಚ್ಚಿರುವ ಬಹುಸಂಖ್ಯಾತರನ್ನು ಉತ್ತೇಜಿಸುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ರಾಜ್ಯದಲ್ಲಿ ಹೊರಗಿನ ರಾಜ್ಯದವರು ಆಸ್ತಿ ಖರೀದಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಚರ್ಚೆ ನಡೆಸುತ್ತಿದೆ. 
ಆರ್ಟಿಕಲ್ 35 ಎ ನ್ನು ಸುಪ್ರೀಂ ಕೋರ್ಟ್ ಅಕ್ರಮ ಎಂದು ಸುಪ್ರೀಂ ಕೋರ್ಟ್ ಹೇಳಿದರೆ ಅದು ರಾಜ್ಯದ ಜನತೆ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಎನ್ ಸಿ ಪ್ರಾಂತೀಯ ಅಧ್ಯಕ್ಷ ದೇವೇಂದ್ರ ರಾಣ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ ಆರ್ಟಿಕಲ್ 35 ಎ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಭಯ ಮೂಡಿಸುವ ಯತ್ನ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com