ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ ಎಂದು ರಕ್ಷಣಾ ಮೂಲಗಳು ಭಾನುವಾರ ತಿಳಿಸಿವೆ.
ಪೂಂಚ್ ಜಿಲ್ಲೆಯ ಮಂಚ್ಕೊಕ್ ಬಳಿಯಿರುವ ಮಂಧಾರ್ ಸೆಕ್ಟರ್ ಬಳಿಯ ಗಡಿಯ ನಿಯಂತ್ರಣ ರೇಖೆ ಬಳಿ ಇಂದು ಬೆಳಿಗ್ಗೆ 8.30ರ ಸುಮಾರಿಗೆ ಪಾಕಿಸ್ತಾನ ಸೇನೆ ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ಹಾಗೂ ಶೆಲ್ ಗಳ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಸ್ಥಳದಲ್ಲಿ ಈಗಲೂ ಪಾಕಿಸ್ತಾನ ಸೇನೆ ಹಾಗೂ ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.
ನಿನ್ನೆಯಷ್ಟೇ ಪೂಂಚ್ ಜಿಲ್ಲೆಯ ಕೃಷ್ಣಘಾಟಿ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಮಹಿಳೆ ಸಾವನ್ನಪ್ಪಿದ್ದರು.