ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೆಹರ್ ಹಾಗೂ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನೊಳಗೊಂಡ ಸುಪ್ರೀಂ ಪೀಠ, ಮುಂದಿನ ವಿಚಾರಣೆವರೆಗೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಅಲ್ಲದೆ ಆರೋಪಿ ಸಿಬಿಐ ತನಿಖೆಯಲ್ಲಿ ಭಾಗಿಯಾಗಬೇಕು ಎಂದು ಸೂಚಿಸಿದೆ.