ದೇಶ

ಪಕ್ಷ ವಿರೋಧಿ ಚಟುವಟಿಕೆ: ಮಾಜಿ ಸಚಿವ ಸೇರಿ ಜೆಡಿಯುನ 10 ಸದಸ್ಯರು ಪಕ್ಷದಿಂದ ಉಚ್ಚಾಟನೆ

ಬಿಹಾರ ಆಡಳಿತರೂಢ ಜೆಡಿಯು ಬಂಡಾಯ ನಾಯಕ ಶರದ್ ಯಾದವ್ ಅವರನ್ನು ಬೆಂಬಲಿಸಿದ ಮಾಜಿ ಸಚಿವ ರಾಮಯ್ಯ ರಾಮ್ ಅವರು....

ಪಕ್ಷ ವಿರೋಧಿ ಚಟುವಟಿಕೆ: ಮಾಜಿ ಸಚಿವ ಸೇರಿ ಜೆಡಿಯುನ 10 ಸದಸ್ಯರು ಪಕ್ಷದಿಂದ ಉಚ್ಚಾಟನೆ
ನಿತೀಶ್ ಕುಮಾರ್
Published On :
ಪಾಟ್ನಾ: ಬಿಹಾರ ಆಡಳಿತರೂಢ ಜೆಡಿಯು ಬಂಡಾಯ ನಾಯಕ ಶರದ್ ಯಾದವ್ ಅವರನ್ನು ಬೆಂಬಲಿಸಿದ ಮಾಜಿ ಸಚಿವ ರಾಮಯ್ಯ ರಾಮ್ ಅವರು ಸೇರಿದಂತೆ ಪಕ್ಷದ 10 ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಸೋಮವಾರ ಉಚ್ಚಾಟನೆಗೊಳಿಸಲಾಗಿದೆ.
ಮಾಜಿ ಸಚಿವ ರಾಮಯ್ಯ ರಾಮ್ ಹಾಗೂ ಮಾಜಿ ಸಂಸದ ಅರ್ಜನ್ ರೈ ಸೇರಿದಂತೆ ಪಕ್ಷದ 10 ಸದಸ್ಯರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಯು ಬಿಹಾರ ಅಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರ್ ಜೆಡಿ ಹಾಗೂ ಕಾಂಗ್ರೆಸ್ ನೊಂದಿಗಿನ ಮಹಾ ಮೈತ್ರಿ ಮುರಿದುಕೊಂಡು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿರ್ಧಾರವನ್ನು ವಿರೋಧಿಸಿದ್ದ ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರನ್ನು ಕಳೆದ ಶನಿವಾರ ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ವಜಾಗೊಳಿಸಿತ್ತು. ಅಲ್ಲದೆ ಅವರ ಸ್ಥಾನಕ್ಕೆ ನಿತೀಶ್ ಕುಮಾರ್ ಆಪ್ತ ಆರ್ ಸಿಪಿ ಸಿಂಗ್ ಅವರನ್ನು ಆಯ್ಕೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.