ಗೋರಖ್ ಪುರ ಪ್ರಕರಣ ಎಸ್ ಐಟಿ ತನಿಗೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿ ವಜೊಗೊಳಿಸಿದ "ಸುಪ್ರೀಂ"

ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಸರಣಿ ಸಾವಿನ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಸರಣಿ ಸಾವಿನ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಮೊದಲು ಉತ್ತರ ಪ್ರದೇಶ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ಸಲಹೆ ನೀಡಿದೆ. ಪ್ರಕರಣ ಗಂಭೀರವಾದ ವಿಚಾರವೇ ಆದರೂ, ಈ ಬಗ್ಗೆ ಮೊದಲು ಹೈಕೋರ್ಟ್ ನ ಗಮನಕ್ಕೆ ತರಬೇಕು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಅಂತೆಯೇ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ಅವರು, ಪ್ರಕರಣವನ್ನು ಸ್ವತಃ ಸಿಎಂ ಯೋಗಿ ಆದಿತ್ಯಾನಾಥ್ ಅವರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಹೀಗಿರುವಾಗ ಸ್ವಯಂ ಪ್ರೇರಿತ ಅರ್ಜಿ ಸ್ವೀಕಾರ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com