ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ದೇಶ
71ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಭಾರತೀಯರಿಗೆ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಟ್ರಂಪ್
ದೇಶದಾದ್ಯಂತ 71ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ...
ನವದೆಹಲಿ: ದೇಶದಾದ್ಯಂತ 71ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶುಭಾಶಯಗಳನ್ನು ತಿಳಿಸಿರುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಲು ದೂರವಾಣಿ ಕರೆ ಮಾಡಿದ್ದರು. ಅವರಿಗೆ ನನ್ನ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ