ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಯಂದೂ ಪಾಕಿಸ್ತಾನ ಸೇನಾ ಪಡೆಗಳು ಕಾಶ್ಮೀರದ ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಎರಡು ಪ್ರದೇಶಗಳಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಹನೀಫಾ ಬೇಗಂ ಎಂಬ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗಿದೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉರಿ ಸೆಕ್ಟರ್ ಬಳಿ ಎರಡು ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಭಾರತೀಯ ಯೋಧರು ಹಾಗೂ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆಂದು ಹೇಳಿದ್ದಾರೆ.
ಉತ್ತರ ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ಸತತ 3 ದಿನಗಳಿಂದ ಕದನ ವಿರಾಮ ಉಲ್ಲಂಘನೆ ನಡೆಸಿದ್ದಾರೆ. ಒಂದು ಕಡೆ ಪಾಕಿಸ್ತಾನಿ ಅರೆಸೇನಾ ಪಡೆಗಳಿಂದ ಭಾರತೀಯ ಯೋಧರು ಸ್ವಾತಂತ್ರ್ಯ ದಿನಾಚರಣೆಯ ಸಿಹಿ ಹಂಚುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಯೋಧರು ಗುಂಡಿನ ಮಳೆಗೆರೆದಿದ್ದಾರೆ.