ಜಮ್ಮು-ಕಾಶ್ಮೀರ: ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತನ ಗುಂಡು ಹಾಗೂ ಶೆಲ್ ಗಳ ದಾಳಿ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತನ ಗುಂಡು ಹಾಗೂ ಶೆಲ್ ಗಳ ದಾಳಿ ನಡೆಸುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳು ಹಾಗೂ ಮಾರ್ಟರ್ ಶೆಲ್ ಗಳಿಂದ ದಾಳಿ ನಡೆಸುತ್ತಿದೆ. ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ರಕ್ಷಣಾ ವಕ್ತಾರ ಹೇಳಿದ್ದಾರೆ.
ಇದರೊಂದಿಗೆ ಪೂಂಚ್ ಸೆಕ್ಚರ್ ಬಳಿಯಿರುವ ಮನ್ಕೊಟೆ ಸೆಕ್ಟರ್ ಬಳಿಯಲ್ಲೂ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಆಗಸ್ಟ್ 13 ರಿಂದ ಪಾಕಿಸ್ತಾನ ಸೇನೆ ಕೃಷ್ಣಘಾಟಿ, ನೌಶೆರಾ, ಮನ್ಕೊಟೆ ಮತ್ತು ಉತ್ತರ ಕಾಶ್ಮೀರಗಳಲ್ಲಿ ಒಟ್ಟು 4 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ಯೋಧರಿಗೆ ಗಾಯಗಳಾಗಿವೆ.