ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರದ 12 ಕಡೆಗಳಲ್ಲಿ ಎನ್ಐಎ ದಾಳಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳು ಪಾಕಿಸ್ತಾನದಿಂದ ಹಣಕಾರು ನೆರವು ಪಡೆಯುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳು ಪಾಕಿಸ್ತಾನದಿಂದ ಹಣಕಾರು ನೆರವು ಪಡೆಯುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ಮತ್ತೆ ಕಾಶ್ಮೀರ 12 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಶ್ರೀನಗರ, ಬಾರಾಮುಲ್ಲಾ ಮತ್ತು ಹಂದ್ವಾರ ಸೇರಿದಂತೆ ಒಟ್ಟು 12 ಪ್ರತ್ಯೇಕ ಪ್ರದೇಶಗಳಲ್ಲಿ ದಾಳಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆಗೊಳಪಡಿಸಿದ ವ್ಯಕ್ತಿಗಳು ನೀಡಿದ ಮಾಹಿತಿ ಆಧಾರದ ಮೇರೆಗೆ ಇಂದು ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ.24ರಂದು 7 ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡುಕೊಂಡಿದ್ದರು.