ಹೈದರಾಬಾದ್ ಡ್ರಗ್ ಮಾಫಿಯಾ: ಮುಂದಿನ ತಿಂಗಳು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ರಾಜ್ಯವನ್ನು ತಲ್ಲಣಗೊಳಿಸಿರುವ ಹೈಟೆಕ್ ಡ್ರಗ್ ಜಾಲದ ತನಿಖೆ ನಡೆಸುತ್ತಿರುವ ತೆಲಂಗಾಣ ಅಬಕಾರಿ ಇಲಾಖೆಯ ವಿಶೇಷ ತನಿಖಾ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಹೈದರಾಬಾದ್: ರಾಜ್ಯವನ್ನು ತಲ್ಲಣಗೊಳಿಸಿರುವ ಹೈಟೆಕ್ ಡ್ರಗ್ ಜಾಲದ ತನಿಖೆ ನಡೆಸುತ್ತಿರುವ ತೆಲಂಗಾಣ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ(ಎಸ್ಐಟಿ) ಆರೋಪಿಗಳ ವಿರುದ್ಧ ಮುಂದಿನ ತಿಂಗಳು ಚಾರ್ಜ್ ಸಲ್ಲಿಸಲಿದೆ ಎಂದು ಶುಕ್ರವಾರ ಅಬಕಾರಿ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ರಮ ಡ್ರಗ್ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರರಂಗದ ಹಲವು ನಟ, ನಟಿ ಹಾಗೂ ನಿರ್ದೇಶಕರನ್ನು ವಿಚಾರಣೆ ಒಳಪಡಿಸಿರುವ ಎಸ್ಐಟಿ, ಈ ಸಂಬಂಧ ಅಮೆರಿಕ ಪ್ರಜೆ ಸೇರಿದಂತೆ 22 ಮಂದಿಯನ್ನು ಬಂಧಿಸಿದೆ. ಅಲ್ಲದೆ ಒಟ್ಟು 11 ಪ್ರಕರಣಗಳನ್ನು ದಾಖಲಿಸಿದೆ.
ಪ್ರಕರಣದ ತನಿಖೆಯ ಬಗ್ಗೆ ನನಗೆ ತೃಪ್ತಿ ಇದೆ. ಕಾನೂನು ಸಲಹೆಗಾರರೊಂದಿಗೆ ಮತ್ತು ಸರ್ಕಾರಿ ವಕೀಲರೊಂದಿಗೆ ಗಂಭೀರವಾಗಿ ಚರ್ಚಿಸುತ್ತಿದ್ದು, ಸೆಪ್ಟೆಂಬರ್ ಅಂತ್ಯದೊಳಗೆ ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಅಬಕಾರಿ ಇಲಾಖೆ ನಿರ್ದೇಶಕ ಅಕುನ್ ಸಭರವಾಲ್ ಅವರು ತಿಳಿಸಿದ್ದಾರೆ.
ಅಕ್ರಮವಾಗಿ ಡ್ರಗ್ ಅನ್ನು ಶಾಲಾ–ಕಾಲೇಜುಗಳಿಗೆ ಸರಬರಾಜು ಮಾಡಲಾಗಿದ್ದು, ನಗರದ ಖಾಸಗಿ ಶಾಲಾ–ಕಾಲೇಜುಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡ್ರಗ್‌ ವ್ಯಸನಿಗಳಾಗಿರುವುದನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.
ನಾಸಾದಲ್ಲಿ ಕಾರ್ಯನಿರ್ವಹಿಸಿದ್ದ ಏರೋಸ್ಪೇಸ್‌ ಎಂಜಿನಿಯರ್‌ , ಏಳು ಜನ ಬಿ.ಟೆಕ್‌ ಪದವೀಧರರು ಹಾಗೂ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 13 ಜನ ಆರೋಪಿಗಳನ್ನು ಡ್ರಗ್‌ ವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಬಂಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com