ಸಂವಿಧಾನ ತಿದ್ದುಪಡಿ ಮಾಡಲು ಆರ್ ಎಸ್ ಎಸ್ ಯತ್ನ: ರಾಹುಲ್ ಆರೋಪ

ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಆರ್ ಎಸ್ ಎಸ್ ಯತ್ನಿಸುತ್ತಿದೆ. ಹೀಗಾಗಿ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಬೇಕೆಂದು ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರ್ ಎಸ್ ಎಸ್ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. 
ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಆರ್ ಎಸ್ ಎಸ್ ಯತ್ನಿಸುತ್ತಿದೆ. ಹೀಗಾಗಿ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಬೇಕೆಂದು ಕರೆ ನೀಡಿದ್ದಾರೆ.
ಒಬ್ಬ ವ್ಯಕ್ತಿ  ಒಂದು ಮತ ಎಂದು ಸಂವಿಧಾನದಲ್ಲಿ ಉಲ್ಲೇಖವಾಗಿದೆ. ಸಂವಿಧಾನ ಜನರಿಗೆ ನೀಡಿರುವ ಹಕ್ಕುಗಳನ್ನು ನಾಶಪಡಿಸಲು ಆರ್ ಎಸ್ ಎಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. 
ಜೆಡಿಯು ಬಂಡಾಯ  ನಾಯಕ ಶರದ್ ಯಾದವ್ ಅವರ ಸಂಸ್ಕೃತಿ ಉಳಿಸಿ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮ ತತ್ವ ಸಿದ್ಧಾಂತಗಳಿಂದ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಆರ್ ಎಸ್ ಎಸ್ ಮನಗಂಡಿದೆ. ಹೀಗಾಗಿ ಅಡಳಿತ, ಮಾಧ್ಯಮ ಮತ್ತು ವಿಶ್ವ ವಿದ್ಯಾನಿಲಯ ಸೇರಿದಂತೆ ಎಲ್ಲಾ ಸಂಸ್ಥೆಗಳಲ್ಲೂ ಆರ್ ಎಸ್ ಎಸ್ ವ್ಯಕ್ತಿಗಳನ್ನು ನೇಮಕಮಾಡುತ್ತಿದ್ದಾರೆ ಎಂದು ರಾಹುಲ್ ದೂರಿದ್ದಾರೆ.
ಗುಜರಾತ್ ನಲ್ಲಿ ದಲಿತರ ಮೇಲಿನ ದೌರ್ಜನ್ಯ ಆರ್ ಎಸ್ ಎಸ್ ತಾರತಮ್ಯ ನೀತಿಯನ್ನು ತೋರಿಸುತ್ತದೆ. ರಾಷ್ಟ್ರೀಯತೆ ಮತ್ತು ದೇಶಭಕ್ತಿ ನಡುವಿನ ವ್ಯತ್ಯಾಸದ ಬಗ್ಗೆ ವಿವರಣೆ ನೀಡುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. 
ಒಂದು ಹೇಳುತ್ತದೆ, ಈ ದೇಶ ನನ್ನದು, ಮತ್ತೊಂದು ಹೇಳುತ್ತದೆ ನಾನು ಈ ದೇಶಕ್ಕೆ ಸೇರಿದವನು,  ಇದು ಆರ್ ಎಸ್ ಎಸ್ ಮತ್ತು ಕಾಂಗ್ರೆಸ್ ನಡುವೆ ಇರುವ ವ್ಯತ್ಯಾಸವಾಗಿದೆ ಎಂದು ರಾಹುಲ್ ವಿವರಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ನೀಡಿದ ಭರವಸೆಗಳನ್ನು ಇದುವರೆಗೂ ಈಡೇರಿಸಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com