ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು 2019ರ ಸಾರ್ವತ್ರಿಕ ಚುನಾವಣೆಯ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುರುವಾರ ಮಹತ್ವದ...
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು 2019ರ ಸಾರ್ವತ್ರಿಕ ಚುನಾವಣೆಯ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುರುವಾರ ಮಹತ್ವದ ಸಭೆ ನಡೆಸಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಅಧಿಕ ಸಂಸದರನ್ನು ಗೆಲ್ಲಿಸುವ ಗುರಿಯನ್ನು ಹೊಂದಿರುವ 'ಮಿಷನ್ 2019' ರ ಕುರಿತ ತಂತ್ರಗಾರಿಕೆಗಳ ಬಗ್ಗೆ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಚರ್ಚೆ ನಡೆಯಿತು.
2014ರ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೋತ 150 ಸೀಟುಗಳ ಮೇಲೆ ಗಮನ ಹರಿಸುವಂತೆ ಶಾ ಪಕ್ಷದ ಪ್ರಮುಖರಿಗೆ ಕರೆ ನೀಡಿದ್ದಾರೆ.
ಕೇಂದ್ರ ಸಚಿವರುಗಳಾದ ರವಿ ಶಂಕರ್ ಪ್ರಸಾದ್, ಅನಂತ್ ಕುಮಾರ್, ಜೆ.ಪಿ. ನಡ್ಡಾ, ಪಕ್ಷದ ಪದಾಧಿಕಾರಿಗಳಾದ ರಾಮ್ ಲಾಲ್, ಅನಿಲ್ ಜೈನ್, ಭೂಪೇಂದ್ರ ಶಾ ಸೇರಿದಂತೆ ಪಕ್ಷದ 31 ಪ್ರಮುಖ ನಾಯಕರು ಸಭೆಯಲ್ಲಿ ಹಾಜರಿದ್ದರು.