ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಜನತಾಪಕ್ಷ(ಬಿಜೆಪಿ)ದ ಕಟ್ಟರ್ ವಿರೋಧಿ ಎಂದೇ ಗುರುತಿಸಿಕೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೀಗ ಮೋದಿ ಪರ ಮೃದು ಧೋರಣೆ ತಳೆದಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ದ ಕಿಡಿಕಾರಿದ್ದಾರೆ.
ಖಾಸಗಿ ಸುದ್ದಿ ವಾಹಿನಿ ಸಿಎನ್ಎನ್ ನ್ಯೂಸ್ 18ಗೆ ನೀಡಿದ ಸಂದರ್ಶನದ ವೇಳೆ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಅವರ ಬಗ್ಗೆ ನನಗೇನೂ ಆಕ್ಷೇಪವಿಲ್ಲ ಎಂದಿರುವ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತಾ ಶಾ ಒಬ್ಬ ಸರ್ವಾಧಿಕಾರಿ. ಶಾ ಪ್ರಧಾನಿ ಮೋದಿಯನ್ನು ಓವರ್ ಟೇಕ್ ಮಾಡುತ್ತಿದ್ದಾರೆ.
ಆಡಳಿತ ಪಕ್ಷದ ಅಧ್ಯಕ್ಷರೊಬ್ಬರು ಸಚಿವರ ಸಭೆ ಕರೆಯುತ್ತಾರೆ ಎಂದರೆ ದೇಶದ ಪ್ರಧಾನಿ ಯಾರು ಎಂಬ ಬಗ್ಗೆ ಅನುಮಾನ ಮೂಡುತ್ತದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ನಾನು ಪ್ರಧಾನಿಯನ್ನು ದೂಷಿಸುವುದಿಲ್ಲ. ಬದಲಿಗೆ ಈ ಬೆಳವಣಿಗೆಗಳಿಗೆ ಬಿಜೆಪಿಯೇ ಹೊಣೆ ಎಂದು ಮೋದಿ ಪರ ಬ್ಯಾಟ್ ಬೀಸಿದ್ದಾರೆ.