ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಆ.21 ರಂದು ಬಿಜೆಪಿ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ.
ಅಮಿತ್ ಷಾ-ನರೇಂದ್ರ ಮೋದಿ
ಅಮಿತ್ ಷಾ-ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಆ.21 ರಂದು ಬಿಜೆಪಿ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ. 
ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಯ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. 13 ಮುಖ್ಯಮಂತ್ರಿಗಳು 6 ಉಪಮುಖ್ಯಮಂತ್ರಿಗಳು, ಪ್ರಮುಖ ಕ್ಯಾಬಿನೆಟ್ ಸಚಿವರುಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ. 
ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ನಡೆಯುತ್ತಿರುವ 3 ನೇ ಸಭೆ ಇದಾಗಿದೆ. ಸಭೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜಾರಿಗೊಳಿಸಿರುವುದರ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯಲಿದ್ದಾರೆ.  
2019 ರ ಲೋಕಸಭಾ ಚುನಾವಣೆಗೆ ಅಮಿತ್ ಷಾ ನೀಲನಕ್ಷೆ ಸಿದ್ಧಪಡಿಸಿದ ಬೆನ್ನಲ್ಲೆ ಮುಖ್ಯಮಂತ್ರಿಗಳ ಸಭೆ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com