ಉತ್ಕಲ್ ಎಕ್ಸ್'ಪ್ರೆಸ್ ರೈಲು ದುರಂತ: ಮೃತರ ಕುಟುಂಬಕ್ಕೆ ರೂ.3.5 ಲಕ್ಷ ಪರಿಹಾರ ಘೋಷಣೆ

ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ತನಿಖೆಗೆ ಆದೇಶಿಸಿದ್ದು, ತಾವೇ ಖುದ್ದಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿರುವುದಾಗಿ ಹೇಳಿದ್ದಾರೆ...
ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತ
ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತ
ಲಖನೌ: ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ತನಿಖೆಗೆ ಆದೇಶಿಸಿದ್ದು, ತಾವೇ ಖುದ್ದಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿರುವುದಾಗಿ ಹೇಳಿದ್ದಾರೆ. 
ದುರ್ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಘಟನೆಯಲ್ಲಿ ಸಾವನ್ನಪ್ಪಿದವರ ಕುಟಂಬಕ್ಕೆ ರೂ.3.5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ.50 ಸಾವಿರ ಪರಿಹಾರ ಘೋಷಿಸಿದ್ದಾರೆ. 
ಇದರೊಂದಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕೂಡ ಮೃತರ ಕುಟುಂಬಕ್ಕೆ ರೂ.5 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ. 
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ನೆರವು ನೀಡುವುದಾಗಿ ತಿಳಿಸಿದ್ದಾರೆ. ಪರಿಹಾರ ಕಾರ್ಯಕ್ಕೆ ನೆರವಾಗಲು ಇಬ್ಬರು ಸಚಿವರನ್ನು ನಿಯೋಜಿಸಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೂ ಕೂಡ ಘಟನೆಯಿಂದ ತಮಗೆ ಅತೀವ ದುಃಖವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 
ಪದೇ ಪದೇ ನಡೆಯುತ್ತಿರುವ ರೈಲು ದುರಂತಗಳ ಹೊಣೆ ಹೊತ್ತು ರೈಲ್ವೆ ಸಚಿವ ಸುರೇಶ್ ಪ್ರಭು ರಾಜೀನಾಮೆ ನೀಡಬೇಕು ಎಂದು ಮಾಜಿ ರೈಲ್ವೆ ಸಚಿವ ಲಾಲುಪ್ರಸಾದ್ ಯಾದವ್ ಆಗ್ರಹಿಸಿದ್ದಾರೆ. 
ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಭು ಕಾರ್ಯನಿರ್ವಹಣೆ ಬಗ್ಗೆ ತೀವ್ರ ಆಕ್ಷೇಪಗಳು ಕೇಳಿಬಂದಿದ್ದು, 'ಬುಲೆಟ್ ರೈಲು ಏಕೆ ಬೇಕು? ಇದ್ಧ ರೈಲುಗಳನ್ನು ಸುರಕ್ಷಿತವಾಗಿ ಓಡಿಸಿ ಸಾಕು ಎಂದು ಆಗ್ರಹಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com