ನರೇಂದ್ರ ಮೋದಿ-ಪಳನಿಸ್ವಾಮಿ
ದೇಶ
ಎಐಎಡಿಎಂಕೆ ವಿಲೀನಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ಎಐಎಡಿಎಂಕೆ ಯ ಎರಡು ಬಣಗಳು ವಿಲೀನವಾಗಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ನವದೆಹಲಿ: ಎಐಎಡಿಎಂಕೆ ಯ ಎರಡು ಬಣಗಳು ವಿಲೀನವಾಗಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪನ್ನೀರ್ ಸೆಲ್ವಂ ಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪನ್ನೀರ್ ಸೆಲ್ವಂ ಹಾಗೂ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಇತರ ಸಚಿವರಿಗೆ ಅಭಿನಂದನೆಗಳು, ತಮಿಳುನಾಡು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ