2008 ರ ಮಾಲೆಗಾಂವ್ ಸ್ಫೋಟ ಪ್ರಕರಣ ಸಂಬಂಧ ಮಧ್ಯಂತರ ಜಾಮೀನು ಕೋರಿ ಪುರೋಹಿತ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಳೆದ ವಾರ ವಿಚಾರಣೆ ನಡೆಸಿತ್ತು. ಅಂತೆಯೇ ತನ್ನ ತೀರ್ಪನ್ನು ಇಂದಿಗೆ ಮುಂದೂಡಿತ್ತು. ಇದೀಗ ಶ್ರೀಕಾಂತ್ ಪುರೋಹಿತ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸೆಪ್ಟೆಂಬರ್ 29, 2008 ರಂದು ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದರು. ಪ್ರಕರಣ ಸಂಬಂಧ ವಿಶೇಷ ಎಂಸಿಓಸಿಎ (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯಿದ) ನ್ಯಾಯಾಲಯವು ಭಯೋತ್ಪಾದನಾ-ವಿರೋಧಿ ದಳವು ಪ್ರಜ್ಞಾಸಿಂಗ್ ಠಾಕೂರ್, ಪುರೋಹಿತ್ ಸೇರಿಾದಂತೆ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು.
ಅಂತೆಯೇ ಆರೋಪಿಗಳ ವಿರುದ್ಧ ಸುಮಾರು ನಾಲ್ಕು ಸಾವಿರ ಪುಟಗಳ ಆರೋಪ ಪಟ್ಟಿ ಕೂಡ ಸಲ್ಲಿಸಿತ್ತು. ಆರೋಪಪಟ್ಟಿಯಲ್ಲಿ ಠಾಕೂರ್, ಪಾಂಡೇ ಹಾಗೂ ಪುರೋಹಿತ್ ಅವರು ಆರ್ ಡಿಎಕ್ಸ್ ಮೂಲಕ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು.
ಪ್ರಕರಣ ಸಂಬಂಧ ಸುಧೀರ್ಘ ವಿಚಾರಣೆಯ ಹೊರತಾಗಿಯೂ ಪುರೋಹಿತ್ ಗೆ ಜಾಮೀನು ನೀಡಲು ಬಾಂಬೇ ಹೈಕೋರ್ಟ್ ನಿರಾಕರಿಸಿತ್ತು. ಹೀಗಾಗಿಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಪುರೋಹಿತ್ ಸುಪ್ರೀಂ ಕೋರ್ಟ್ ಮೆಟ್ಟಿಲ್ಲೇರಿದ್ದರು..