ತ್ರಿವಳಿ ತಲಾಖ್ ಅಸಂವಿಧಾನಿಕ; ಸದ್ಯಕ್ಕೆ ರದ್ದು; ಪ್ರತ್ಯೇಕ ಕಾನೂನು ತರಲು ಕೇಂದ್ರಕ್ಕೆ ಸುಪ್ರೀಂ ಸೂಚನೆ!

ತೀವ್ರ ಕುತೂಹಲ ಕೆರಳಿಸಿದ್ದ ತ್ರಿವಳಿ ತಲಾಕ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ವೈಯುಕ್ತಿಕ ಕಾನೂನಿಗೆ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ತ್ರಿವಳಿ ತಲಾಕ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ವೈಯುಕ್ತಿಕ ಕಾನೂನಿಗೆ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್  ತ್ರಿವಳಿ ತಲಾಖ್ ಅನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸಾಂವಿಧಾನಿಕ ಪೀಠದ ಪಂಚ ಸದಸ್ಯರ ಪೈಕಿ ಇಬ್ಬರು ಸದಸ್ಯರು ತ್ರಿವಳಿ ತಲಾಖ್ ಗೆ ಅನುಮೋದನೆ ನೀಡಿದ್ದು, ಉಳಿದ ಮೂವರು ನ್ಯಾಯಾಧೀಶರು ಮುಸ್ಲಿಂ ವೈಯುಕ್ತಿಕ ಕಾನೂನಿಗೆ ಸಂವಿಧಾನ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಅದರಂತೆ ಬಹುಮತದ ಆಧಾರದ ಮೇಲೆ ತ್ರಿವಳಿ ತಲ್ಲಾಖ್ ಅನ್ನು ಮುಂದಿನ 6 ತಿಂಗಳ ಕಾಲ ರದ್ದು ಮಾಡಲಾಗಿದ್ದು, 6 ತಿಂಗಳೊಳಗೆ ಈ ಬಗ್ಗೆ ಸೂಕ್ತ ಕಾನಾನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಅ ಮೂಲಕ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ತಳ್ಳಿದೆ.

ಐವರು ನ್ಯಾಯಮೂರ್ತಿಗಳಲ್ಲಿ ಮೂವರು ನ್ಯಾಯಮೂರ್ತಿಗಳು ತ್ರಿವಳಿ ತಲಾಖ್‌ ವಿರುದ್ಧ ತೀರ್ಪು ಪ್ರಕಟಿಸಿದ್ದಾರೆ. ನ್ಯಾಯಮೂರ್ತಿ ಕುರಿಯನ್​ ಜೋಸೆಫ್​​ (ಕ್ರಿಶ್ಚಿಯನ್​​), ನ್ಯಾ. ಆರ್​.ಎಫ್​. ನಾರಿಮನ್​ (ಪಾರ್ಸಿ), ನ್ಯಾ. ಉದಯ್​​ ಲಲಿತ್​​​ (ಹಿಂದೂ) ಅವರು ತ್ರಿವಳಿ ತಲಾಕ್ ಗೆ ಕಾನೂನು ಮಾನ್ಯತೆ ಇಲ್ಲ ಎಂದು ಹೇಳಿ ಆಚರಣೆಯನ್ನು ರದ್ದು ಮಾಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನ ವಿಚಾರಣೆ ನಡೆಸಿತ್ತು. ಮೇ 18ರಂದು ವಿಚಾರಣೆ ಪೂರ್ಣಗೊಂಡಿತ್ತು. ತೀರ್ಪು ಕಾಯ್ದಿರಿಸಲಾಗಿತ್ತು.

ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು. ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು. ತ್ರಿವಳಿ ತಲಾಖ್‌ ಪದ್ಧತಿಯು ಇಸ್ಲಾಂ ಧರ್ಮದ ಮೂಲಭೂತ ಅಂಶ ಅಲ್ಲ ಎಂದೂ ಸರ್ಕಾರ ಪ್ರತಿಪಾದಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com