"ಕಳೆದ 3 ವರ್ಷಗಳಲ್ಲಿ ನಾನು ರೈಲ್ವೆ ಇಲಾಖೆಯ ಅಭಿವೃದ್ಧಿ, ಆಧುನೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರಮಿಸಿದ್ದೇನೆ, ದಶಕಗಳ ನಿರ್ಲಕ್ಷ್ಯಗಳನ್ನು ಸರಿಪಡಿಸಲು ಯತ್ನಿಸಿದ್ದೇನೆ. ಇದೇ ಮಾರ್ಗದಲ್ಲಿ ರೈಲ್ವೆ ಇಲಾಖೆ ಅಭಿವೃದ್ಧಿಯೂ ಆಗುತ್ತಿದೆ ಎಂದು ಭರವಸೆಯನ್ನೂ ನೀಡುತ್ತೇನೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಅಪಘಾತಗಳಿಂದ ಉಂಟಾದ ಸಾವು-ನೋವುಗಳಿಂದ ಮನಸ್ಸಿಗೆ ನೋವುಂಟಾಗಿದೆ. ಆದ್ದರಿಂದ ಹೊಣೆಹೊತ್ತು ರಾಜೀನಾಮೆ ನೀಡಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಆದರೆ ಇನ್ನೂ ಸ್ವಲ್ಪ ದಿನ ಕಾಯುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದು ಸುರೇಶ್ ಪ್ರಭು ಹೇಳಿದ್ದಾರೆ.