ಖಾಸಗಿತನ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟ

ಖಾಸಗಿತನ ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬ ಬಗ್ಗೆ ಸುಪ್ರೀಂ ಕೋರ್ಟ್ಇಂದು ಮಹತ್ವದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಖಾಸಗಿತನ ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಇಂದು  ಮಹತ್ವದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. 
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಅವರನ್ನೊಳಗೊಂಡ 9 ಸದಸ್ಯ ಪೀಠ ಖಾಸಗಿತನ ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬ ಬಗೆಗಿನ ತೀರ್ಪನ್ನು ಆ.2 ರಂದು ಕಾಯ್ದಿರಿಸಿದ್ದು, ಆ.24 ರಂದು ಪ್ರಕಟಿಸುವ ಸಾಧ್ಯತೆ ಇದೆ. 
ಈ ಮಹತ್ವದ ಪ್ರಕರಣದಲ್ಲಿ ಹಿರಿಯ ನ್ಯಾಯವಾದಿಗಳಾದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರವಿಂದ್ ದತಾರ್, ಕಪಿಲ್ ಸಿಬಲ್, ಗೋಪಾಲ್ ಸುಬ್ರಹ್ಮಣಿಯಮ್ ಸೇರಿದಂತೆ ಹಲವರು ವಾದ ಮಂಡಿಸಿದ್ದಾರೆ. 
ಸರ್ಕಾರದ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ಸರಕಾರ ಆಧಾರ್‌ ಕಾರ್ಡನ್ನು ಕಡ್ಡಾಯ ಮಾಡಿರುವುದರಿಂದ ಜನರ ಖಾಸಗಿ ಮಾಹಿತಿಗಳು ಬಹಿರಂಗವಾಗುತ್ತಿವೆ ಎಂದು ಅರ್ಜಿದಾರರೊಬ್ಬರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com