ಲಾಲು ಬಿಜೆಪಿ ವಿರೋಧಿ ರ್ಯಾಲಿಯಲ್ಲಿ ಬಿಎಸ್ಪಿ ಭಾಗವಹಿಸುವುದಿಲ್ಲ: ಮಾಯಾವತಿ

ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಆಗಸ್ಟ್ 27ರಂದು ಪಾಟ್ನಾದಲ್ಲಿ ಆಯೋಜಿಸಿರುವ ಬಿಜೆಪಿ ಭಗವೋ ರ್ಯಾಲಿಯಲ್ಲಿ ಬಹುಜನ ಸಮಾಜ...
ಮಾಯಾವತಿ
ಮಾಯಾವತಿ
Updated on: 
ಲಖನೌ: ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಆಗಸ್ಟ್ 27ರಂದು ಪಾಟ್ನಾದಲ್ಲಿ ಆಯೋಜಿಸಿರುವ ಬಿಜೆಪಿ ಭಗವೋ ರ್ಯಾಲಿಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಭಾಗವಹಿಸುವುದಿಲ್ಲ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಬಿಜೆಪಿ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸದಿರುವ ಬಗ್ಗೆ ವಿವರಣೆ ನೀಡಿರುವ ಮಾಯಾವತಿ ಅವರು, ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬುದನ್ನು ಮುಂಚಿತವಾಗಿಯೇ ನಿರ್ಧರಿಸಿದರೆ ಮಾತ್ರ ರ್ಯಾಲಿಯಲ್ಲಿ ಭಾಗವಹಿಸುವುದಾಗಿ ಆರ್ ಜೆಡಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.
ಬಿಎಸ್ಪಿ ನಾಯಕ ಸತೀಶ್ ಮಿಶ್ರಾ ಅವರು ಬಿಜೆಪಿ ಭಗವೋ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಆಗಸ್ಟ್ 16ರಂದು ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದರು. ಅಲ್ಲದೆ ಹಿರಿಯ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಸಿಪಿ ಜೋಶಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಹ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದರು.
ಲಾಲು ಪ್ರಸಾದ್ ಯಾದವ್ ಅವರು ನಾಲ್ಕು ತಿಂಗಳ ಹಿಂದೆಯೇ ಬಿಹಾರದಲ್ಲಿ ಮಹಾಮೈತ್ರಿಕೂಟ ಮುರಿದು ಬೀಳುವ ಮುನ್ನವೇ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸುವುದಕ್ಕಾಗಿ ಈ ರ್ಯಾಲಿ ಆಯೋಜಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com