ರವಿಶಂಕರ್ ಪ್ರಸಾದ್
ರವಿಶಂಕರ್ ಪ್ರಸಾದ್

ಖಾಸಗಿತನ ಮೂಲಭೂತ ಹಕ್ಕು: ಸುಪ್ರೀಂ ತೀರ್ಪು ಸ್ವಾಗತಿಸಿದ ಕೇಂದ್ರ

ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಸ್ವಾಗತಿಸುತ್ತದೆ ಎಂದು ಗುರುವಾರ ಕೇಂದ್ರ.....
ನವದೆಹಲಿ: ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಸ್ವಾಗತಿಸುತ್ತದೆ ಎಂದು ಗುರುವಾರ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರು ಹೇಳಿದ್ದಾರೆ. 
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರವಿಶಂಕರ್ ಪ್ರಸಾದ್ ಅವರು, ಸುಪ್ರೀಂ ಕೋರ್ಟ್‌ ತೀರ್ಪನ್ನು ನಮ್ಮ ಸರ್ಕಾರ ಸ್ವಾಗತಿಸುತ್ತದೆ. ಖಾಸಗಿತನದ ಹಕ್ಕಿಗೆ ಸಂಬಂಧಿಸಿದ ಚರ್ಚೆ ನಡೆಸದೆ ಆಧಾರ್ ಯೋಜನೆ ಜಾರಿಗೊಳಿಸಲು ಈ ಹಿಂದಿನ ಯುಪಿಎ ಸರ್ಕಾರ ಚಿಂತನೆ ನಡೆಸಿತ್ತು. ಇದು ಯುಪಿಎ ಸರ್ಕಾರ ಕೆಲಸ ಮಾಡಿದ ರೀತಿಯನ್ನು ತೋರಿಸುತ್ತದೆ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆಧಾರ್ ಯೋಜನೆಗೆ ಸಂಬಂಧಿಸಿದಂತೆ ಯುಪಿಎ ಸರ್ಕಾರದ ವಿರುದ್ಧ ಗೂಬೆ ಕೂರಿಸಿದ ಹೊರತಾಗಿಯೂ ಆಧಾರ್ ಯೋಜನೆಯನ್ನು ರವಿಶಂಕರ್ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ. ಆಧಾರ್ ಯೋಜನೆಯಡಿ ಸಂಗ್ರಹಿಸಲಾದ ಅಂಕಿಅಂಶಗಳನ್ನು ಸುರಕ್ಷಿತವಾಗಿ ಕಾಯ್ದಿರಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ ಎಂದು ಅವರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಕೆ.ಎಸ್ ಖೇಹರ್ ನೇತೃತ್ವದ 9 ನ್ಯಾಯ ಮೂರ್ತಿಗಳ ಸಂವಿಧಾನಿಕ ಪೀಠ ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸರ್ವಾನುಮತದಿಂದ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ಈ ಮಹತ್ವದ ತ್ರೀರ್ಪಿನಿಂದಾಗಿ ಆಧಾರ್ ಕಾರ್ಡ್ ಭವಿಷ್ಯ ಅತಂತ್ರವಾಗುವ ಸಾಧ್ಯತೆಯಿದೆ. ಅಲ್ಲದೆ ಸಲಿಂಗಕಾಮ, ಗೋಮಾಂಸ ನಿಷೇಧ,, ಟೆಲಿ ಮಾರ್ಕೆಟಿಂಗ್‌ ಕಾಯ್ದೆಗಳ ಮೇಲೆ  ಈ ತೀರ್ಪು ಪರಿಣಾಮ ಬೀರುವ ಸಾಧ್ಯತೆಗಳಿವೆ.

Related Stories

No stories found.

Advertisement

X
Kannada Prabha
www.kannadaprabha.com