ಕೋಲ್ಕತಾ: ಮೊಹರಂ ಆಚರಣೆಯ ದಿನದಂದು ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ.
ಪಶ್ಚಿಮ ಬಂಗಾಳ ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದ್ದು, ಸೆ.30 ರಿಂದ ಅ.1 ರ ವರೆಗೆ ಅಂದರೆ ಒಂದು ದಿನ ಮೊಹರಂ ಆಚರಣೆಯ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ದುರ್ಗಾ ಮೂರ್ತಿಗಳನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಅ.2 ರಿಂದ ಮೂರ್ತಿ ವಿಸರ್ಜನೆಗೆ ಅವಕಾಶವಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಳೆದ ವರ್ಷವೂ ಮಮತಾ ಬ್ಯಾನರ್ಜಿ ಇಂಥಹದ್ದೇ ಆದೇಶ ನೀಡಿದ್ದರು ಆದರೆ ಮಮತಾ ಬ್ಯಾನರ್ಜಿ ಸರ್ಕಾರದ ಆದೇಶಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ ನೀಡಿತ್ತು. ಈ ಬಾರಿಯೂ ಸರ್ಕಾರದ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಬಿಜೆಪಿ ಹೇಳಿದೆ.