ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ಖಾಸಗಿತನ ಮೂಲಭೂತ ಹಕ್ಕು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.ಮುಖ್ಯ ನ್ಯಾಯಮೂರ್ತಿ ಕೆ.ಎಸ್ ಖೇಹರ್ ನೇತೃತ್ವದ 9 ನ್ಯಾಯ ಮೂರ್ತಿಗಳ ಸಂವಿಧಾನಿಕ ಪೀಠ ಸರ್ವಾನುಮತದಿಂದ ಈ ಐತಿಹಾಸಿಕ ತೀರ್ಪು ನೀಡಿದೆ...
ನವದೆಹಲಿ: ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.
ಮುಖ್ಯ ನ್ಯಾಯಮೂರ್ತಿ ಕೆ.ಎಸ್ ಖೇಹರ್ ನೇತೃತ್ವದ 9 ನ್ಯಾಯ ಮೂರ್ತಿಗಳ ಸಂವಿಧಾನಿಕ ಪೀಠ ಸರ್ವಾನುಮತದಿಂದ ಈ ಐತಿಹಾಸಿಕ ತೀರ್ಪು ನೀಡಿದೆ.
ಆಧಾರ್ ಗಾಗಿ ಜನರ ವಯಕ್ತಿಕ ಮಾಹಿತಿ ಸಂಗ್ರಹ ಹಿನ್ನೆಲೆಯಲ್ಲಿ ಖಾಸಗಿತನದ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು,  ಇದರಿಂದ ಆಧಾರ್ ಕಾರ್ಡ್ ಭವಿಷ್ಯ ಅತಂತ್ರವಾಗುವ ಸಾಧ್ಯತೆಯಿದೆ. 
ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಹಿನ್ನೆಲೆಯನ್ನು ಪ್ರಶ್ನಿಸಿ ಕೆಲವರು ಅರ್ಜಿ ಸಲ್ಲಿಸಿದರು.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಅವರನ್ನೊಳಗೊಂಡ 9 ಸದಸ್ಯ ಪೀಠ ಖಾಸಗಿತನ ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬ ಬಗೆಗಿನ ತೀರ್ಪನ್ನು ಆ.2 ರಂದು ಕಾಯ್ದಿರಿಸಿತ್ತು. 

Related Stories

No stories found.

Advertisement

X
Kannada Prabha
www.kannadaprabha.com