ಸುಪ್ರೀಂ ಕೋರ್ಟ್ ನ ತೀರ್ಪಿನಿಂದ ಫ್ಯಾಸಿಸ್ಟ್ ಪಡೆಗಳಿಗೆ ಹಿನ್ನಡೆ: ರಾಹುಲ್ ಗಾಂಧಿ

ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದರಿಂದ ಪ್ಯಾಸಿಸ್ಟ್ ಪಡೆಗಳಿಗೆ ತೀವ್ರ ಹಿನ್ನಡೆಯುಂಟಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದರಿಂದ ಪ್ಯಾಸಿಸ್ಟ್ ಪಡೆಗಳಿಗೆ ತೀವ್ರ ಹಿನ್ನಡೆಯುಂಟಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರತಿಯೊಂದರ ಮೇಲೂ ನಿಗಾ ಇರಿಸುವ ಮೂಲಕ ಧ್ವನಿಯನ್ನು ಅಡಗಿಸುವ ಬಿಜೆಪಿಯ ಸಿದ್ಧಾಂತ ತಿರಸ್ಕೃತವಾಗಿದೆ, ಸುಪ್ರೀಂ ಕೋರ್ಟ್ ನ ಆದೇಶ ಪ್ರತಿಯೊಬ್ಬ ಭಾರತೀಯನ ಜಯವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಟ್ವಿಟರ್ ನಲ್ಲಿ ಸುಪ್ರೀಂ ಕೋರ್ಟ್ ನ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಖಾಸಗಿತನವನ್ನು ಮೂಲಭೂತ ಹಕ್ಕು ಎಂದಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಆ.24 ರಂದು ಆದೇಶ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com