ಚಿತ್ರಕೂಟ್ ಎನ್'ಕೌಂಟರ್: ಹುತಾತ್ಮ ಪೊಲೀಸ್ ಅಧಿಕಾರಿ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ಘೋಷಣೆ
ಚಿತ್ರಕೂಟದಲ್ಲಿ ದರೋಡೆಕೋರರ ವಿರುದ್ಧ ನಡೆಸಲಾಗಿದ್ದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಜೈ ಪ್ರಕಾಶ್ ಸಿಂಗ್ ಅವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್...
ಲಖನೌ: ಚಿತ್ರಕೂಟದಲ್ಲಿ ದರೋಡೆಕೋರರ ವಿರುದ್ಧ ನಡೆಸಲಾಗಿದ್ದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಜೈ ಪ್ರಕಾಶ್ ಸಿಂಗ್ ಅವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ರೂ.25 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಉತ್ತರಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ದರೋಡೆಕೋರರು ಅಡಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ನಿನ್ನೆ ಬೆಳಿಗ್ಗೆ ವಿಶೇಷ ಕಾರ್ಯಾಚರಣಾ ಪಡೆ ಹಾಗೂ 39 ಬೆಟಾಲಿಯನ್ ಪಡೆ, ರಾಜ್ಯ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು.
ಈ ವೇಳೆ ದರೋಡೆಕೋರರು ಹಾಗೂ ಪೊಲೀಸರು ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಸಬ್ ಇನ್ಸ್ ಪೆಕ್ಟರ್ ಜೈ ಪ್ರಕಾಶ್ ಸಿಂಗ್ ಅವರು ಹುತಾತ್ಮರಾಗಿದ್ದರು.