ದೇವಮಾನವ ರಾಮ್ ರಹೀಮ್ ಅತ್ಯಾಚಾರ ಪ್ರಕರಣದ ದೋಷಿ: ಪಂಚಕುಲ ಸಿಬಿಐ ಕೋರ್ಟ್ ಮಹತ್ವದ ತೀರ್ಪು

ಮಹತ್ವದ ಬೆಳವಣಿಗೆಯಲ್ಲಿ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ ಎಂದು ಪಂಚಕುಲ ಸಿಬಿಐ ಕೋರ್ಟ್ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ ಎಂದು ಪಂಚಕುಲ ಸಿಬಿಐ ಕೋರ್ಟ್ ಹೇಳಿದೆ.

2002ರಲ್ಲಿ ಗುರ್ಮಿತ್ ರಾಮ್ ರಹೀಮ್ ಅವರ ಆಶ್ರಮದಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣ ಸಂಬಂಧ ಶುಕ್ರವಾರ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ  ದೇವಮಾನವ ರಾಮ್ ರಹೀಮ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅಂತೆಯೇ ಪ್ರಕರಣ ಸಂಬಂಧ ಅಪರಾಧಿ ರಾಮ್ ರಹೀಮ್ ಗೆ ಆಗಸ್ಟ್ 28ರಂದು ಶಿಕ್ಷೆ ಪ್ರಮಾಣ ಪ್ರಕಟ ಮಾಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಆ ಮೂಲಕ 15 ವರ್ಷಗಳ ಹಿಂದಿನ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತೆರೆ  ಎಳೆದಿದೆ.

ಅಂಬಾಲ ಕೇಂದ್ರ ಕಾರಾಗೃಹಕ್ಕೆ ದೇವಮಾನವ
ಅತ್ತ ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಇತ್ತ ದೋಷಿ ರಾಮ್ ರಹೀಮ್ ರನ್ನು ಅಂಬಾಲ ಕೇಂದ್ರ ಕಾರಾಗೃಹದತ್ತ ಪೊಲೀಸರು ಕರೆದೊಯ್ಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com