ರಾಮ್ ರಹೀಮ್ ಅತ್ಯಾಚಾರ ಪ್ರಕರಣದ ತೀರ್ಪು: ಹಿಂಸಾಚಾರದಲ್ಲಿ ಮೃತರ ಸಂಖ್ಯೆ 28ಕ್ಕೆ ಏರಿಕೆ!

ಡೇರಾ ಸಚ್ಚಾ ಸೌಧ ಸಂಸ್ಥೆಯ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪಿನ ಸಂಬಂಧ ಭುಗಿಲೆದ್ದಿರುವ ವ್ಯಾಪಕ ಹಿಂಸಾಚಾರದಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 28ಕ್ಕೆ ಏರಿಕೆಯಾಗಿದ್ದು, 200 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹಿಂಸಾಚಾರ ಪೀಡಿತ ಪಂಚಕುಲ ಪ್ರದೇಶ
ಹಿಂಸಾಚಾರ ಪೀಡಿತ ಪಂಚಕುಲ ಪ್ರದೇಶ
Updated on: 

ಚಂಢೀಘಡ: ಡೇರಾ ಸಚ್ಚಾ ಸೌಧ ಸಂಸ್ಥೆಯ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪಿನ ಸಂಬಂಧ ಭುಗಿಲೆದ್ದಿರುವ ವ್ಯಾಪಕ ಹಿಂಸಾಚಾರದಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 28ಕ್ಕೆ  ಏರಿಕೆಯಾಗಿದ್ದು, 200 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹಿಂಸಾಚಾರ ಪ್ರಕರಣದ ಕೇಂದ್ರ ಬಿಂದು ಪಂಚಕುಲದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 28ಕ್ಕೆ ಏರಿಕೆಯಾಗಿದ್ದು, ಪ್ರಕರಣದಲ್ಲಿ ಸುಮಾರು 200 ಮಂದಿ ಗಾಯಗೊಂಡಿದ್ದಾರೆ. ಅಂತೆಯೇ ಹರ್ಯಾಣ ಮತ್ತು ಪಂಜಾಬ್ ನಾದ್ಯಂತ ರೈಲು  ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಮಧ್ಯಾಹ್ನದಿಂದ ಇಲ್ಲಿಯವರೆಗೂ ಸುಮಾರು 250ಕ್ಕೂ ಅಧಿಕ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಹರ್ಯಾಣದಾದ್ಯಂತ ಹೆಚ್ಚುವರಿ ಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ವ್ಯಾಪಕ  ಭದ್ರತೆ ಹೆಚ್ಚಿಸಲಾಗಿದೆ. ಪಂಚಕುಲದಲ್ಲಿ ಈ ವರೆಗೂ ಸುಮಾರು ಸಾವಿರ ಅನುಯಾಯಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಹರ್ಯಾಣದ ನಾಲ್ಕು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಪಂಜಾಬ್ ನ ಸಂಗ್ರೂರ್ ಮತ್ತು ಮೊಗಾ ಜಿಲ್ಲೆಗಳಲ್ಲೂ ಕರ್ಫ್ಯೂ ಹೇರಿಕೆ ಮಾಡಲಾಗಿದೆ. ಗಲಭೆ ಸಂಬಂಧ ಪಂಜಾಬ್  ಸಿಎಂ ಅಮರೀಂದರ್ ಸಿಂಗ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಡೇರಾ ಆಶ್ರಮ ಪ್ರವೇಶಿಸಲು ಸೇನೆ ಸನ್ನದ್ಧ
ಏತನ್ಮಧ್ಯೆ ಹರ್ಯಾಣ ಹೈಕೋರ್ಟ್ ಡೇರಾ ಸಚ್ಚಾ ಆಶ್ರಮದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚನೆ ನೀಡಿದ ಬೆನ್ನಲ್ಲೇ ಸಿಐಎಸ್ ಎಫ್ ನ ಸುಮಾರು 6 ಕಂಪನಿಯ 600 ಯೋಧರು ಸಿರ್ಸಾದಲ್ಲಿರುವ ಡೇರಾ ಸಚ್ಚಾ  ಆಶ್ರಮವನ್ನು ಸುತ್ತುವರೆದಿದ್ದಾರೆ. ಆಶ್ರಮ ಪ್ರವೇಶಿಸಿ ಆಶ್ರಮವನ್ನು ವಶಕ್ಕೆ ಪಡೆಯಲು ಸೈನಿಕರು ಕಾರ್ಯಾಚರಣೆ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಆಶ್ರಮದ ಸುತ್ತ ನೆರೆದಿರುವ ಲಕ್ಷಾಂತರ  ಅನುಯಾಯಿಗಳನ್ನು ಚದುರಿಸಲು ಕೂಡ ಸೇನಾಪಡೆಯ ಯೋಧರು ಕಾರ್ಯತಂತ್ರ ರೂಪಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com