ಇಂದು ಬೆಳಗ್ಗೆ ಪುಲ್ವಾಮ ಜಿಲ್ಲೆಯ ಜಿಲ್ಲಾ ಪೊಲೀಸ್ ರೇಖೆ (ಡಿಪಿಎಲ್) ಬಳಿ ಬಂದ ಉಗ್ರರ ಗುಂಪೊಂದು ಯೋಧರು ಹಾಗೂ ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಪರಿಣಾಮ ನಾಲ್ವರು ಸಿಆರ್ ಪಿಎಫ್ ಸಿಬ್ಬಂದಿ ಹಾಗೂ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.