ಡೇರಾ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾದ ನಂತರ ಸೇನೆ ಡೇರಾದ ಮುಖ್ಯ ಕಚೇರಿ ಪ್ರವೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೇಜರ್ ಜನರಲ್ ರಾಜಪಾಲ್ ಪುನಿಯಾ ಅವರು, ಡೇರಾ ಕ್ಯಾಂಪಸ್ ಪ್ರವೇಶಿಸುವ ಯಾವುದೇ ಯೋಜನೆ ಸದ್ಯಕ್ಕೆ ಸೇನೆ ಮುಂದೆ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.