ವ್ಯಾಪಕ ಹಿಂಸಾಚಾರದ ಬಳಿಕ ಸಹಜ ಸ್ಥಿತಿಯತ್ತ ಪಂಚಕುಲ!

ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಹೊತ್ತಿ ಉರಿದಿದ್ದ ಪಂಚಕುಲ ಶನಿವಾರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಸಹಜ ಸ್ಥಿತಿಯತ್ತ ಪಂಚಕುಲ
ಸಹಜ ಸ್ಥಿತಿಯತ್ತ ಪಂಚಕುಲ
Updated on: 

ಚಂಢೀಘಡ: ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಹೊತ್ತಿ ಉರಿದಿದ್ದ ಪಂಚಕುಲ ಶನಿವಾರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ.

ರಾತ್ರಿ ಇಡೀ ಸೇನಾಪಡೆ ಯೋಧರು ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಪಹರೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಂಚಕುಲದಲ್ಲಿ ಅರೆಸೇನಾ ಪಡೆಯ 10 ತುಕಡಿಗಳನ್ನು  ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಇಂದು ಮುಂಜಾನೆಯಿಂದಲೇ ಜನ ತಮ್ಮ ತಮ್ಮ ಮನೆಗಳಿಂದ ಹೊರಬರುತ್ತಿದ್ದಾರೆ.

ಇನ್ನು ಘಟನಾ ಪ್ರದೇಶದಲ್ಲಿ ಇಂದೂ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ನಿರಂತರ ಪರೇಡ್ ಮಾಡುತ್ತಿದ್ದಾರೆ. ಅಂತೆಯೇ ಉಭಯ ರಾಜ್ಯಗಳ ನಡುವಿನ ರೈಲು ಸಂಚಾರ ಸ್ಥಗಿತವಾಗಿದ್ದು,  ಈ ವರೆಗೂ ಸುಮಾರು 485 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

ಪಂಚಕುಲ ಡಿಸಿಪಿ ಅಮಾನತು
ಇನ್ನು ನಿನ್ನೆ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಪಂಚಕುಲ ಡಿಸಿಪಿ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪದ ಮೇರೆಗೆ ಅಶೋಕ್ ಕುಮಾರ್ ಅವರನ್ನು ಅಮಾನತು  ಮಾಡಲಾಗಿದ್ದು, ನಿನ್ನೆ ನಿಷೇಧಾಜ್ಞೆಯನ್ನು ಸಮರ್ಪಕವಾಗಿ ಜಾರಿಗೊಳಿಸದ ಹಿನ್ನಲೆಯಲ್ಲಿ ಇಂದು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com