ರಾಮ್ ರಹೀಂ ಅತ್ಯಾಚಾರ ತೀರ್ಪು: ಪಂಚಕುಲ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆ!

ಶುಕ್ರವಾರ ಹರ್ಯಾಣದ ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದ ಬೆನ್ನಲ್ಲೇ ಭುಗಿಲೆದ್ದಿದ್ದ ಹಿಂಸಾಚಾರ ಪ್ರಕರಣದಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಪಂಚಕುಲದಲ್ಲಿ ಸೇನಾ ಪರೇಡ್
ಪಂಚಕುಲದಲ್ಲಿ ಸೇನಾ ಪರೇಡ್
Updated on: 

ಚಂಢೀಘಡ: ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಂ ಸಿಂಗ್‌ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು  ಶುಕ್ರವಾರ ಹರ್ಯಾಣದ ಪಂಚಕುಲಾ ಸಿಬಿಐ ವಿಶೇಷ  ನ್ಯಾಯಾಲಯ ಪ್ರಕಟಿಸಿದ ಬೆನ್ನಲ್ಲೇ ಭುಗಿಲೆದ್ದಿದ್ದ ಹಿಂಸಾಚಾರ ಪ್ರಕರಣದಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಇನ್ನು ಹಿಂಸಾಚಾರದ ಕೇಂದ್ರ ಬಿಂದು ಪಂಚಕುಲದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇಂದು ಯಾವುದೇ ರೀತಿಯ ಹಿಂಸಾಚಾರ ಕಂಡುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಿನ್ನೆ ನಡೆದ ಹಿಂಸಾಚಾರದಿಂದಾಗಿ  ಸಾವನ್ನಪ್ಪಿರುವವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಅಂತೆಯೇ ಘಟನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತೆಯೇ ರಾಜಧಾನಿ ದೆಹಲಿ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೇಳುತ್ತಿದ್ದಂತೆಯೇ ಇತ್ತ ಪಕ್ಕದ ರಾಜಸ್ತಾನದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹರ್ಯಾಣದ ಸಿರ್ಸಾ ಮತ್ತು  ಪಂಚಕುಲದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪಂಜಾಬ್ ನ 10 ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ.

ಮುನ್ನೆಚ್ಚರಿಕೆಯ ಅಂಗವಾಗಿ ವಿಶೇಷ ಸಿಬಿಐ ನ್ಯಾಯಾಲಯದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಕೂಡಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅನುಯಾಯಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅರೆ  ಸೇನಾಪಡೆ, ಪೊಲೀಸ್ ಪಡೆಯನ್ನೂ ನಿಯೋಜಿಸಲಾಗಿತ್ತು. ಆದರೆ ಕೋರ್ಟ್ ತೀರ್ಪು ಪ್ರಕಟಿಸಿದ ಕೂಡಲೇ ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದಿತು. ತದನಂತರ ಪಂಚಕುಲ, ಬಟಿಂಡಾ, ಫಿರೋಜ್ ಪುರ್ ಮತ್ತು ಮಾನ್ಸಾದಲ್ಲಿ  ಕರ್ಫ್ಯೂ ಜಾರಿಗೊಳಿಸಲಾಗಿತ್ತು. ರೊಚ್ಚಿಗೆದ್ದ ಬೆಂಬಲಿಗರು ಬೆಂಕಿಹಚ್ಚುವುದು, ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾನಿಗೊಳಿಸತೊಡಗಿದ್ದಾರೆ. ಸಿಂಗ್ ಅನುಯಾಯಿಗಳು ಪೊಲೀಸರ ನಡುವೆ ಘರ್ಷಣೆ ಮುಂದುವರಿದಿತ್ತು,

ಆಗಸ್ಟ್ 28ರಂದು ರಾಮ್ ರಹೀಂ ಸಿಂಗ್ ಗೆ ಕೋರ್ಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com