ಸೇಲಂ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ಪಳನಿಸ್ವಾಮಿಯನ್ನು ವಜಾ ಮಾಡಿದ ದಿನಕರನ್

ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿಯವರನ್ನು ಪಕ್ಷದ ಸೇಲಂ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಿದ್ದಾರೆ.
ಮುಖ್ಯಮಂತ್ರಿ ಕೆ.ಪಳನಿಸ್ವಾಮಿ
ಮುಖ್ಯಮಂತ್ರಿ ಕೆ.ಪಳನಿಸ್ವಾಮಿ
ಚೆನ್ನೈ: ಆಡಳಿತದ ವಿರೋಧಿ ಅಲೆಯಲ್ಲಿ ಮುಂಚೂಣಿಯಲ್ಲಿರುವ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿಯವರನ್ನು ಪಕ್ಷದ ಸೇಲಂ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಿದ್ದಾರೆ.
ಎಐಎಡಿಎಂಕೆ ಪಕ್ಷದ ಎರಡು ಬಣಗಳ ವಿಲೀನ ಹಿನ್ನೆಲೆಯಲ್ಲಿ ದಿನಕರನ್ ತನ್ನ ಅಧಿಕಾರವನ್ನು ಪ್ರತಿಷ್ಠಾಪಿಸಲು ಹೋರಾಟ ನಡೆಸಿದ್ದಾರೆ, ಇಂದು ನಡೆದ ಪಕ್ಷದ ಸಭೆಯಲ್ಲಿ ಪಳನಿಸ್ವಾಮಿ ಸೇಲಂ ಉಪನಗರ ಜಿಲ್ಲೆಯ ಕಾರ್ಯದರ್ಶಿ ಸ್ಥಾನದಿಂದ ಇಂದು ಹೊರನಡೆಯಲಿದ್ದಾರೆ ಎಂದು ಅವರು ಘೋಷಿಸಿದರು.
ಪಳನಿಸ್ವಾಮಿ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯಾಲಯದ ಕಾರ್ಯದರ್ಶಿಯಾಗಿದ್ದಾರೆ ಆದರೆ ದಿನಕರನ್ ಅವರ ಹೇಳಿಕೆಯಲ್ಲಿ ಅದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ.
ದಿನಕರನ್ ಹಲವು ಪಕ್ಷದ ಕಾರ್ಯಕರ್ತರನ್ನು, ವಿಶೇಷವಾಗಿ ಜಿಲ್ಲಾ ಕಾರ್ಯದರ್ಶಿಗಳು, ದ್ರಾವಿಡ ಪಕ್ಷಗಳ ಶ್ರೇಣಿಯಲ್ಲಿನ ಪ್ರಮುಖ ಹುದ್ದೆಗಳಲ್ಲಿದ್ದವರನ್ನು ವಜಾ ಮಾಡಿದ್ದಾರೆ ಮತ್ತು ಆಗಸ್ಟ್ 21 ರಂದು ಪಳನಿಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಮ್ ನೇತೃತ್ವದ ಎಐಎಡಿಎಂಕೆ ಬಣಗಳ ವಿಲೀನದ ನಂತರ ಅವರ ಈ ಬದಲಾವಣೆಗಳನ್ನು ಮಾಡಲಾಗಿದೆ.
ವಿಲೀನದ ನಂತರ, ಜೈಲಿನಲ್ಲಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ದಿನಕರನ್ ಅವರ ಚಿಕ್ಕಮ್ಮ ವಿ. ಕೆ. ಶಶಿಕಾಳರನ್ನು ಪಕ್ಷದಿಂದ ಹೊರಹಾಕಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಘೋಷಿಸಲಾಗಿದೆ.
ಸೇಲಂ ಉಪನಗರ ಜಿಲ್ಲೆಯ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಎಸ್. ಕೆ. ಸೆಲ್ವಂ ಅವರುಪಳನಿಸ್ವಾಮಿಯವರ ಸ್ಥಾನಕ್ಕೆ ನೇಮಕವಾಗಲಿದ್ದಾರೆ ಎಂದು ಅವರು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com