ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಲು ಉದಯ್ ಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಆ.29 ರಂದು ರಾಜಸ್ತಾನದ ಉದಯ್ ಪುರಕ್ಕೆ ಭೇಟಿ ನೀಡಲಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
ಜೈಪುರ: ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಆ.29 ರಂದು ರಾಜಸ್ತಾನದ ಉದಯ್ ಪುರಕ್ಕೆ ಭೇಟಿ ನೀಡಲಿದ್ದಾರೆ.
ರಾಜಸ್ಥಾನದ ಲೇಕ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಉದಯ್ ಪುರಕ್ಕೆ ಪ್ರಧಾನಿ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 
ಸುಮಾರು 15,000 ಕೋಟಿ ರೂಪಾಯಿ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಈಗಾಗಲೇ ಪೂರ್ಣಗೊಂಡಿರುವ 873 ಕಿಮೀ ಅಂತರದ ಪೂರ್ಣಗೊಂಡಿರುವ 11 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಸಿದ್ಧತೆಗಳ ಪರಿಶೀಲನೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com