ಕಾಶ್ಮೀರ: ನಿಶಸ್ತ್ರ ಪೊಲೀಸ್ ಅಧಿಕಾರಿಯನ್ನು ಹತ್ಯೆಮಾಡಿದ ಉಗ್ರಗಾಮಿಗಳು
ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಿಶಸ್ತ್ರ ಪೊಲೀಸ್ ಅಧಿಕಾರಿಯಾನ್ನು ಹತ್ಯೆ ಮಾಡಿದ್ದಾರೆ. ಅಬ್ದುಲ್ ರಶೀದ್ ಉಗ್ರರ ಗುಂಡಿಗೆ ಬಲಿಯಾಗಿರುವ ಎಎಸ್ಐ ಆಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಿಶಸ್ತ್ರ ಪೊಲೀಸ್ ಅಧಿಕಾರಿಯಾನ್ನು ಹತ್ಯೆ ಮಾಡಿದ್ದಾರೆ. ಅಬ್ದುಲ್ ರಶೀದ್ ಉಗ್ರರ ಗುಂಡಿಗೆ ಬಲಿಯಾಗಿರುವ ಎಎಸ್ಐ ಆಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಉಗ್ರರ ಗುಂಡೇಟಿನಿಂದ ಅಬ್ದುಲ್ ರಶೀದ್ ತೀವ್ರವಾಗಿ ಗಾಯಗೊಂಡಿದ್ದು,ಆಸ್ಪತ್ರೆಗೆ ಸೇರಿಸಲಾಯಿತಾದರೂ ಬದುಕುಳಿಯಲಿಲ್ಲ. ದಾಳಿ ನಡೆದ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ಪ್ರಾರಂಭಿಸಲಾಗಿದೆ. ಪುಲ್ವಾಮ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ಆತ್ಮಹತ್ಯಾ ದಾಳಿ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಇದೇ ವೇಳೆ ಶೋಪೈನ್ ಜಿಲ್ಲೆಯ 6 ಗ್ರಾಮಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ದೊರೆತಿದೆ.