ಮುಂಬೈ ಮಹಾ ಮಳೆಯ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಂದ ಮಾಹಿತಿ ಪಡೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.