ಇಸ್ಲಾಮಾಬಾದ್: ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಮಹಾ ನಿರ್ದೇಶಕ (ದಕ್ಷಿಣ ಏಷ್ಯಾ ಮತ್ತು ಸಾರ್ಕ್) ಮೊಹಮ್ಮದ್ ಫೈಸಲ್ ಅವರು ಭಾರತೀಯ ರಾಯಭಾರಿ ಜೆ.ಪಿ. ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಸಮನ್ಸ್ ನಲ್ಲಿ ನಿನ್ನೆ ಭಾರತೀಯ ಸೇನೆ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ, ಇದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ. 2003ರ ಅಂತರಾಷ್ಟ್ರೀಯ ಗಡಿ ಹಾಗೂ ಕದನ ವಿರಾಮ ಉಲ್ಲಂಘನೆ ಒಪ್ಪಂದವನ್ನು ಭಾರತ ಗೌರವಿಸಬೇಕೆಂದು ಪಾಕಿಸ್ತಾನ ಹೇಳಿಕೊಂಡಿದೆ.