ಕರ್ನಾಕ್ಕಿಯಮ್ಮನ್ ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಿಸಲು ಮೋಹನ್ ಭಾಗವತ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಸರ್ಕಾರಿ ಅನುದಾನಿತ ಶಾಲೆಯಲ್ಲಿ ಮಿಸ್ಟರ್ ಭಾಗವತ್ ಯಾವುದೇ ಕಾರಣಕ್ಕೂ ಧ್ವಜಾರೋಹಣ ನೆರವೇರಿಸಬಾರದು ಎಂದು ಪಾಲಕ್ಕಾಡ್ ಜಿಲ್ಲಾಧಿಕಾರಿ ಮೇರಿ ಕುಟ್ಟಿ ಅವರು ಶಾಲೆಗೆ ಲಿಖಿತ ಆದೇಶ ನೀಡಿದ್ದರು. ಶಾಲೆಯಲ್ಲಿ ಅಧಿಕಾರಿ ವರ್ಗದವರು ಅಥವಾ ಶಾಸಕರಂತಹ ಜನಪ್ರತಿನಿಧಿಗಳು ಮಾತ್ರ ಧ್ವಜಾರೋಹಣ ನೆರವೇರಿಸಬೇಕು. ಸಂಘಟನೆಗಳ ಮುಖ್ಯಸ್ಥರಿಗೆ ಇದಕ್ಕೆ ಅವಕಾಶ ಇಲ್ಲ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದರು. ಆದರೆ ಭಾಗವತ್ ಅವರು ಜಿಲ್ಲಾಧಿಕಾರಿ ಆದೇಶ ದಿಕ್ಕರಿಸಿ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿಸಿದ್ದರು.