ನವದೆಹಲಿ: ಸುಪ್ರೀಂ ಕೋರ್ಟ್ ಆ.30 ರಂದು ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.
ಕರ್ನಾಟಕ-ತಮಿಳುನಾಡಿನ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿವಾದವಿದ್ದು, ಆ.16 ರಂದು ವಿಚಾರಣೆ ನಡೆಸಿದ್ದ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ನ ಪೀಠ, ತನ್ನ ಮುಂದಿನ ಆದೇಶದವರೆಗೆ 200 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು.
ಜನವರಿ ತಿಂಗಳಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕಾವೇರಿ ವಿವಾದದ ಗಲಾಟೆಯಲ್ಲಿ ಉಭಯ ರಾಜ್ಯಗಳಲ್ಲಿಯೂ ಉಂಟಾದ ನಷ್ಟವನ್ನು ಭರಿಸಲು ಆಗ್ರಹಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು.