ನಾವು ನಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸಿದ್ದೇವೆ: ರಾಜೀನಾಮೆ ಬೇಡಿಕೆಯನ್ನು ಅಲ್ಲಗಳೆದ ಹರ್ಯಾಣ ಸಿಎಂ!

ಡೇರಾ ಸಚ್ಚಾ ಫೌಂಡೇಷನ್ ನ ಬಾಬಾ ರಾಮ್ ರಹೀಮ್ ಅತ್ಯಾಚಾರ ಪ್ರಕರಣದ ದೋಷಿ ಎಂದು ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಉಂಟಾಗಿದ್ದ ಹಿಂಸಾಚಾರವನ್ನು ತಡೆಗಟ್ಟಲು ಸರಿಯಾಗಿ ಕೆಲಸ ಮಾಡಿದ್ದೇವೆ...
ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್
ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್
Updated on
ಹರ್ಯಾಣ: ಡೇರಾ ಸಚ್ಚಾ ಫೌಂಡೇಷನ್ ನ ಬಾಬಾ ರಾಮ್ ರಹೀಮ್ ಅತ್ಯಾಚಾರ ಪ್ರಕರಣದ ದೋಷಿ ಎಂದು ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಉಂಟಾಗಿದ್ದ ಹಿಂಸಾಚಾರವನ್ನು ತಡೆಗಟ್ಟಲು ಸರಿಯಾಗಿ ಕೆಲಸ ಮಾಡಿದ್ದೇವೆ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ರಾಜೀನಾಮೆ ನೀಡಬೇಕೆಂದು ವರಿಷ್ಠರು ಸೂಚಿಸಿರುವುದನ್ನು ಮನೋಹರ್ ಲಾಲ್ ಖಟ್ಟರ್ ಅಲ್ಲಗಳೆದಿದ್ದಾರೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿರುವ ಹರ್ಯಾಣ ಸಿಎಂ ಖಟ್ಟರ್, ಪಂಜಾಬ್-ಹಾರ್ಯಾಣ ಹೈಕೋರ್ಟ್ ನ ತೀರ್ಪಿಗೆ ಅನುಗುಣವಾಗಿ ನಡೆದುಕೊಂಡಿರುವುದಾಗಿ ಹೇಳಿದ್ದಾರೆ. ನನ್ನ ರಾಜೀನಾಮೆಯನ್ನು ಯಾರು ಕೇಳುತ್ತಾರೋ ಕೇಳಲಿ, ಆದರೆ ನಮ್ಮ ಕೆಲಸವನ್ನು ನಾವು ಸರಿಯಾಗಿ ನಿಭಾಯಿಸಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com