ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಗಡುವು ಡಿಸೆಂಬರ್ 31ರವರಗೆ ವಿಸ್ತರಣೆ

ಕೇಂದ್ರ ಸರ್ಕಾರ ಆಧಾರ್ ಜತೆ ಪ್ಯಾನ್ ಕಾರ್ಡ್‌ ಅನ್ನು ಲಿಂಕ್‌ ಮಾಡಲು ವಿಧಿಸಿದ್ದ ಗಡುವನ್ನು ಡಿಸೆಂಬರ್ 31ರವರೆಗೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರ ಆಧಾರ್ ಜತೆ ಪ್ಯಾನ್ ಕಾರ್ಡ್‌ ಅನ್ನು ಲಿಂಕ್‌ ಮಾಡಲು ವಿಧಿಸಿದ್ದ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. 
ಈ ಮುಂಚೆ ತೆರಿಗೆ ಪಾವತಿದಾರರಿಗೆ ತಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್ ಜೊತೆ ಲಿಂಕ್ ಮಾಡಲು ಆದಾಯ ತೆರಿಗೆ ಇಲಾಖೆ ಆಗಸ್ಟ್ 31ಕ್ಕೆ ಗಡುವು ನೀಡಿತ್ತು. ಅದನ್ನು ಈಗ ಮತ್ತೆ ನಾಲ್ಕು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. 
ಇದೇ ಜುಲೈ 1ರಿಂದ ಜಾರಿಗೆ ಬರುವಂತೆ ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್‍ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.
ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಗಳನ್ನು ಹೊಂದುವ ಮೂಲಕ ತೆರಿಗೆ ವಂಚನೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ತೆರಿಗೆ ವಂಚನೆ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ  ಸರ್ಕಾರ ಈ ಮಹತ್ವದ ನಿರ್ಣಯ ಕೈಗೊಂಡಿದೆ.
ಭಾರತೀಯ ಪ್ರಜೆಗಳಲ್ಲದ, ಆಸ್ಸಾಂ, ಮೇಘಾಲಯ ಮತ್ತು ಜಮ್ಮು-ಕಾಶ್ಮೀರದಲ್ಲಿ ನೆಲೆಸಿರುವ 80 ವರ್ಷಕ್ಕೂ ಮೇಲ್ಪಟ್ಟ ವ್ಯಕ್ತಿಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಅಷ್ಟೇ ಅಲ್ಲ ಪ್ರತಿ ಗ್ರಾಹಕರೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಸಹ ಕಡ್ಡಾಯವಾಗಿದ್ದು, ಇದಕ್ಕೂ ಡಿಸೆಂಬರ್ 31 ಕಡೆಯ ದಿನವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com