ಗುಜರಾತ್ ಚುನಾವಣೆಗೆ ಸಿದ್ಧತೆ: ಕೇಂದ್ರ ಸಚಿವರೊಂದಿಗೆ ಅಮಿತ್ ಷಾ ಸಭೆ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಆ.31 ರಂದು ಕೇಂದ್ರ ಸಚಿವರು ಹಾಗೂ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ...
ಅಮಿತ್ ಷಾ
ಅಮಿತ್ ಷಾ
ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಆ.31 ರಂದು ಕೇಂದ್ರ ಸಚಿವರು ಹಾಗೂ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. 
ಅಮಿತ್ ಷಾ ನಿವಾಸದಲ್ಲಿ ಸಭೆ ನಡೆದಿದ್ದು, ಅರುಣ್ ಜೇಟ್ಲಿ, ನರೇಂದ್ರ ಸಿಂಗ್ ತೋಮರ್, ನಿರ್ಮಲಾ ಸೀತಾರಾಮನ್, ಜಿತೇಂದ್ರ ಸಿಂಗ್ ಹಾಗೂ ಪಿಪಿ ಚೌಧರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮ್ ಲಾಲ್, ಭೂಪೇಂದ್ರ ಯಾದವ್, ಗುಜರಾತ್ ಬಿಜೆಪಿ ಮುಖ್ಯಸ್ಥ ಜಿತು ವಘಾನಿ ಕಳೆದ ವಾರ ಅರುಣ್ ಜೇಟ್ಲಿ ಅವರನ್ನು ಗುಜರಾತ್ ನ ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು.
ಈಗ ಉಸ್ತುವಾರಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರೊಂದಿಗೆ ಅಮಿತ್ ಷಾ ಗುಜರಾತ್ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com