ರಾಮೇಶ್ವರಂ: ಶ್ರೀಲಂಕಾ ನೌಕಪಡೆ ಸಿಬ್ಬಂದಿ ದ್ವೀಪ ರಾಷ್ಟ್ರದ ಪ್ರಾದೇಶಿಕ ನೀರಿನಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ಎಂಟು ಮೀನುಗಾರರನ್ನು ಬಂಧಿಸಿದೆ ಮತ್ತು ಎರಡು ಬೋಟ್ ಗಳನ್ನು ಜಪ್ತಿ ಮಾಡಿದೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಶ್ರೀಲಂಕಾ ನೌಕಾಪಡೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಎಂಟು ಮಂದಿಯನ್ನು ಬಂಧಿಸಿದ್ದು, ರಾಮೇಶ್ವರಂನ ನಾಲ್ವರು ಹಾಗೂ ಮಂದಪಂನ ನಾಲ್ವವರು ಮೀನುಗಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಂಧಿತ ತಮಿಳುನಾಡಿನ ಮೀನುಗಾರರನ್ನು ಉತ್ತರ ಶ್ರೀಲಂಕಾದ ಕರೈನಗರ್ ಬಂದರಿಗೆ ಕರೆದೊಯ್ಯಲಾಗಿದೆ ಎಂದು ರಾಮೇಶ್ವರಂ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಹಿಂದೂ ಮಹಾಸಾಗರ ಸಮ್ಮೇಳನದಲ್ಲಿ ಭಾಗವಹಿಸುವುದಕ್ಕಾಗಿ ಎರಡು ದಿನಗಳ ಕಾಲ ಶ್ರೀಲಂಕಾಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.