ಬಂಧಿತ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಕ್ಕಾಗಿ ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ...
ಬಂಧಿತ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ನವದೆಹಲಿ: ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಕ್ಕಾಗಿ ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸ್ಥಳೀಯ ವಿಸ್ತರಿಸಿದೆ. 
ಅಫ್ತಾಬ್ ಹಿಲಾಲಿ ಷಾ, ಅಯಾಜ್ ಅಕ್ಬರ್, ಫಾರೂಕ್ ಅಹ್ಮದ್ ದರ್ ನ್ಯಾಯಾಂಗ ಬಂಧನವನ್ನು ಸೆ.27 ರ ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. 28 ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. 
ಆ.28 ರಂದು ನ್ಯಾಯಾಲಯ ಇನ್ನೂ ನಾಲ್ವರು ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.27 ವರೆಗೆ ವಿಸ್ತರಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com