ನವದೆಹಲಿ: ಮಾಜಿ ಗೃಹ ಕಾರ್ಯದರ್ಶಿ ರಾಜೀವ್ ಮಹರ್ಷಿ ನೂತನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ನೇಮಕಗೊಂಡಿದ್ದಾರೆ. ಪ್ರಮುಖ ಅಧಿಕಾರ ಪುನರ್ರಚನೆಯ ಭಾಗವಾಗಿ, 17 ನಾಗರಿಕ ಸೇವಾ ಅಧಿಕಾರಿಗಳನ್ನು ಕಾರ್ಯದರ್ಶಿಗಳಾಗಿ ನೇಮಿಸಲಾಯಿತು. ಅಲ್ಲದೆ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಿಸಲಾಯಿತು. ರಾಜೀವ್ ಗೌಬಾ, ಜಾರ್ಖಂಡ್ ಕ್ಯಾಡರ್ನ 1982-ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ರಾಜೀವ್ ಮಹರ್ಷಿ ಅವರ ನಿವೃತ್ತಿ ನಂತರ ನೂತನ ಗೃಹ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.