ಡಾ. ರಾಜೇಂದ್ರ ಪ್ರಸಾದ್ 133ನೇ ಜಯಂತಿ: ಪ್ರಧಾನಿ ಮೋದಿ, ಕೇಂದ್ರ ಸಚಿವರಿಂದ ಟ್ವೀಟ್

ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ 133 ನೇ ಜನುಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೆನಪಿಸಿಕೊಂಡಿದ್ದಾರೆ.
ರಾಜೇಂದ್ರ ಪ್ರಸಾದ್
ರಾಜೇಂದ್ರ ಪ್ರಸಾದ್
ನವದೆಹಲಿ: ಸ್ವತಂತ್ರ ಭಾರತದ  ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ 133 ನೇ ಜನುಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೆನಪಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವಿಟ್ಟರ್ ನಲ್ಲಿ ಡಾ. ರಾಜೇಂದ್ರ ಪ್ರಸಾದ್ ಅವರ ಚಿತ್ರವನ್ನು ಪೋಸ್ಟ್ ಮಾಡಿದ್ದಲ್ಲದೆ ಸಂದೇಶವನ್ನು ಬರೆದುಕೊಂಡಿದ್ದಾರೆ.
I
"ಭಾರತವು ಮೊದಲ ರಾಷ್ಟ್ರಪತಿಗಳಾದ ರಾಜೇಂದ್ರ ಪ್ರಸಾದ್ ಅವರನ್ನು ಅವರ ಜಯಂತಿಯಂದು ನೆನೆಯುತ್ತದೆ. ತಲೆಮಾರುಗಳಿಂದಲೂ ಭಾರತೀಯರು ಡಾ. ರಾಜೇಂದ್ರ ಪ್ರಸಾದ್ ಅವರ ವಿಶೇಷ ಸೇವೆಗಳಿಂದ ಸ್ಫೂರ್ತಿ ಪಡೆಯುತ್ತಿದ್ದಾರೆ." ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ರೈಲ್ವೆ ಮತ್ತು ಕಲ್ಲಿದ್ದಲು ಸಚಿವ, ಪಿಯುಶ್ ಗೋಯಲ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ಧರ್ಮೇಂದ್ರ ಪ್ರಧಾನ್ ಅವರುಗಳು ಸಹ ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನಾಚರಣೆಯಂದು ಅವರ ಸ್ಮರಣೆಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಜೇಂದ್ರ ಪ್ರಸಾದ್ ಭಾರತದ ಮೊದಲ ರಾಷ್ಟ್ರಪತಿಗಳಾಗಿದ್ದರು. 1950-1962 ಅವಧಿಯಲ್ಲಿ ರಾಷ್ಟ್ರಪತಿಗಳಗಿ ಅಧಿಕಾರ ಅಧಿಕಾರ ನಿರ್ವಹಿಸಿದ್ದರು.  ಭಾರತ ಸ್ವಾತಂತ್ರ ಸಂಗ್ರಾಮದಲ್ಲಿ ಭಾಗವಹಿಸಿದ್ದ ರಾಜೇಂದ್ರ ಪ್ರಸಾದ್  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಮುಖ ನಾಯಕರಾಗಿದ್ದರು. ಗಾಂಧೀಜಿಯವರ ಅನುಯಾಯಿಯಾಗಿದ್ದ ಇವರು ಗಾಂಧಿ ಅವರ ಉಪ್ಪಿನ ಸತ್ಯಾಗ್ರಹ ಹಾಗೂ ಕ್ವಿಟ್ ಇಂಡಿಯಾ ಚಳವಳಿಯಿಂದ ಸಪೂರ್ತಿ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com