ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ ಪ್ರಕರಣ: ಮಹಿಳಾ ಆಯೋಗದಿಂದ ಸಂತ್ರಸ್ಥ ಮಹಿಳೆ ಭೇಟಿ

ಗುಜರಾತ್ ಚುನಾವಣೆಯಲ್ಲಿ ಸೆಕ್ಸ್ ಸಿಡಿಯೊಂದು ಬಿರುಗಾಳಿ ಎಬ್ಬಿಸಿದ್ದು, ಪಟೇಲ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಅವರು...
ಮಹಿಳೆಯೊಂದಿಗೆ ಹಾರ್ದಿಕ್ ಪಟೇಲ್
ಮಹಿಳೆಯೊಂದಿಗೆ ಹಾರ್ದಿಕ್ ಪಟೇಲ್
ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಸೆಕ್ಸ್ ಸಿಡಿಯೊಂದು ಬಿರುಗಾಳಿ ಎಬ್ಬಿಸಿದ್ದು, ಪಟೇಲ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಅವರು ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರು ಸಂತ್ರಸ್ಥ ಮಹಿಳೆಯನ್ನು ಭೇಟಿ ಮಾಡಿ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ.
ರೇಖಾ ಶರ್ಮಾ ನೇತೃತ್ವದ ಮಹಿಳಾ ಆಯೋಗದ ತಂಡವೊಂದು ಮಹಿಳೆಯನ್ನು ಭೇಟಿ ಮಾಡಲು ಇಂದು ರಾತ್ರಿ ಸೂರತ್ ಗೆ ಪ್ರಯಾಣ ಬೆಳೆಸುತ್ತಿದ್ದು, ನಾಳೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂತ್ರಸ್ಥೆ ಮಹಿಳೆ ನಮಗೆ ದೂರು ನೀಡಿಲ್ಲ. ಆದರೆ ಅವರನ್ನು ಲೈಂಗಿಕವಾರಿ ಬಳಸಿಕೊಳ್ಳಲಾಗಿದೆ ಎಂದು ದೂರ ಬಂದಿದ್ದು, ಅದರಲ್ಲಿ ಮಹಿಳೆ ಆಯೋಗದೊಂದಿಗೆ ಮಾತನಾಡಲು ಬಯಸಿದ್ದಾರೆ ಎಂದು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಅವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಮಹಿಳೆ ಮುಂದೆ ಬಂದು ದೂರು ನೀಡಲು ಭಯ ಇದೆ ಎನ್ನಲಾಗುತ್ತಿದ್ದು, ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡುವುದಾಗಿ ರೇಖಾ ಶರ್ಮಾ ತಿಳಿಸಿದ್ದಾರೆ.
ಹಾರ್ದಿಕ್ ಪಟೇಲ್ ಅವರು ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪಿ ದೆಹಲಿ ಮೂಲದ ವಕೀಲ ಗೌರವ್ ಗುಲಟಿ ಅವರು ಸೆಕ್ಸ್ ವಿಡಿಯೋ ಸಮೇತ ದೂರು ನೀಡಿದ್ದರು. ಈ ಕುರಿತು ಪರಿಶೀಲಿಸುವುದು ಈ ಮುಂಚೆ ಮಹಿಳಾ ಆಯೋಗ ಹೇಳಿತ್ತು.
ಮೇ 26ರಂದು ರೆಕಾರ್ಡ್ ಆಗಿರುವ ಈ ಸಿಡಿಯಲ್ಲಿ ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಮಹಿಳೆಯೊಂದಿಗೆ ಬೆಡ್‍ರೂಮಲ್ಲಿ ಕಾಣಿಸಿಕೊಂಡಿದ್ದರು. ಮಾಧ್ಯಮಗಳಲ್ಲಿ ಸಿಡಿ ಬಿಡುಗಡೆಯಾದ ಬಳಿಕ ಪ್ರತಿಕ್ರಿಯಿಸಿದ ಹಾರ್ದಿಕ್ ಪಟೇಲ್, ಈ ಸಿಡಿಯಲ್ಲಿರುವುದು ನಾನಲ್ಲ. ಅದು ನಕಲಿ ಸಿಡಿ. ಪಟೇಲ್ ಮೀಸಲಾತಿ ಹೋರಾಟದ ಹೊಡೆತ ತಾಳಲಾರದೇ ಬಿಜೆಪಿಯವರೇ ನಕಲಿ ಸಿಡಿ ಬಿಟ್ಟಿದ್ದಾರೆ ಎಂದು ತಿರುಗೇಟು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com