ಗುಜರಾತ್ ಮಹಿಳೆಯರು ಸೌಲಭ್ಯ ವಂಚಿತರಾಗಿದ್ದಾರೆ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಮಹಿಳೆಯರಿಗೆ ಭದ್ರತ ಹಾಗೂ ವಿದ್ಯಾಭ್ಯಾಸ ಸೇರಿದಂತೆ ಯಾವುದೇ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು
ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆಗಳ ಸರಣಿಯನ್ನು ಮುಂದುವರೆಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಮಹಿಳೆಯರಿಗೆ ಭದ್ರತ ಹಾಗೂ ವಿದ್ಯಾಭ್ಯಾಸ ಸೇರಿದಂತೆ ಯಾವುದೇ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆಗಳನ್ನು ಕೇಳಿರುವ ರಾಹುಲ್ ಗಾಂಧಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಹಿಳೆಯರಿಗೆ ಭದ್ರತೆ, ಶಿಕ್ಷಣ, ಆರೋಗ್ಯ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ, ಮಹಿಳೆಯರನ್ನು ಶೋಷಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಬಿಜೆಪಿ ನೇತೃತ್ವದ ಸರ್ಕಾರದಿಂದ ಭ್ರಮನಿರಸನವಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.